ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ದಿವಾಳಿ

ಸಾಲ ಮಾಡಿರುವುದೇ ಕೇಂದ್ರ ಸರ್ಕಾರದ ಕಳೆದ 10 ವರ್ಷಗಳ ಸಾಧನೆ : ಎಂ.ಲಕ್ಷ್ಮಣ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2024, 7:23 IST
Last Updated 19 ಏಪ್ರಿಲ್ 2024, 7:23 IST
ವಿರಾಜಪೇಟೆ ಪಟ್ಟಣದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ.ಲಕ್ಷಣ್, ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು,  ಕಾರ್ಯಕರ್ತರು ರೋಡ್ ಶೋ ನಡೆಸಿದರು
ವಿರಾಜಪೇಟೆ ಪಟ್ಟಣದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ.ಲಕ್ಷಣ್, ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು,  ಕಾರ್ಯಕರ್ತರು ರೋಡ್ ಶೋ ನಡೆಸಿದರು   

ವಿರಾಜಪೇಟೆ: ಅತೀ ಹೆಚ್ಚು ಸಾಲ ಮಾಡಿರುವುದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಳೆದ 10 ವರ್ಷಗಳ ಸಾಧನೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ದಿವಾಳಿಯಾಗುವುದು ನಿಶ್ಚಿತ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಟೀಕಿಸಿದರು.

ಲೋಕಾಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪಟ್ಟಣದ ಕಾರು ನಿಲ್ದಾಣದಲ್ಲಿ ಗುರುವಾರ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರದ ಸಾಧನೆ ಶೂನ್ಯ. 400ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಕನಸನ್ನು ಬಿಜೆಪಿ ಕಾಣುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಈ ಚುನಾವಣೆಯು ದೇಶದ ದಿಕ್ಕನ್ನು ಬದಲಾಯಿಸಲಿದೆ ಎಂದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿಗಳು ಜನಮಾನಸದಲ್ಲಿ ಉಳಿದಿವೆ. ಅದೇ ರೀತಿಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಕಾಂಗ್ರೆಸ್ ಜಾರಿಗೆ ತರಲಿರುವ ಯೋಜನೆಗಳು ಜನತೆಗೆ ಸಹಕಾರಿಯಾಗಲಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಬಿಜೆಪಿ ಧರ್ಮಧರ್ಮಗಳ ನಡುವೆ ವಿಷಬೀಜ ಬಿತ್ತುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದರು.

ADVERTISEMENT

ವಿಧಾನಪರಿಷತ್ತಿನ ಮಾಜಿ ಸದಸ್ಯ ಅರುಣ್ ಮಾಚಯ್ಯ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಶೈಲಾ ಕುಟ್ಟಪ್ಪ, ಪಕ್ಷದ ರಾಜ್ಯ ವಕ್ತಾರ ಟಿ.ಪಿ.ರಮೇಶ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ರಂಜಿ ಪೂಣಚ್ಚ, ವಿರಾಜಪೇಟೆ ಪುರಸಭೆಯ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬಹಿರಂಗ ಸಭೆಗೂ ಮೊದಲು ಪಟ್ಟಣದ ತೆಲುಗರ ಬೀದಿಯಲ್ಲಿರುವ ಮಾರಿಯಮ್ಮ ದೇವಾಲಯದಿಂದ ಜೈನರ ಬೀದಿ, ಎಫ್.ಎಂ.ಸಿ ರಸ್ತೆ ಹಾಗೂ ಗಡಿಯಾರ ಕಂಬದ ಮೂಲಕ ಪಕ್ಷದ ಪಕ್ಷದ ಅಭ್ಯರ್ಥಿ ಎಂ.ಲಕ್ಷಣ್, ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ ಪಕ್ಷದ ಪದಾಧಿಕಾರಿಗಳು  ರೋಡ್ ಶೋ ನಡೆಸಿದರು.

ವಿರಾಜಪೇಟೆ ಪಟ್ಟಣದ ಕಾರು ನಿಲ್ದಾಣದಲ್ಲಿ ಗುರುವಾರ ನಡೆದ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.