
ನಾಪೋಕ್ಲು: ಮಳೆಯ ಆತಂಕದ ನಡುವೆ ನಾಲ್ಕುನಾಡಿನಲ್ಲಿ ಸುಗ್ಗಿಯಹಬ್ಬ ಪುತ್ತರಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ನಾಪೋಕ್ಲು, ಮೂರ್ನಾಡು ಸೇರಿದಂತೆ ವಿವಿಧೆಡೆ ಪಟಾಕಿಗಳು, ಪುತ್ತರಿ ಗೆಣಸುಗಳ ಭರ್ಜರಿ ವ್ಯಾಪಾರ ನಡೆಯಿತು.
ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಕುಂಬ್ಯಾರು ಕಲಾಡ್ಚ ಹಬ್ಬವನ್ನು ಆಚರಿಸಲಾಯಿತು. ಉತ್ಸವದ ಅಂಗವಾಗಿ ದೇವರ ನೃತ್ಯಬಲಿ ಜರುಗಿತು. ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಜ್ಯೋತಿಷ್ಯ ಶಶಿಕುಮಾರ್, ಕಣಿಯರ ನಾಣಯ್ಯ ಕುಟುಂಬದವರು ಜ್ಯೋತಿಷ್ಯದ ಪ್ರಕಾರ ದಿನ ನಿಗದಿಪಡಿಸಿದ್ದಂತೆ ಗುರುವಾರ ರೋಹಿಣಿ ನಕ್ಷತ್ರದ ಹುಣ್ಣಿಮೆಯ ದಿನ ಪುತ್ತರಿ ಹಬ್ಬ ಆಚರಿಸಲಾಯಿತು. ರಾತ್ರಿ 8.10ಕ್ಕೆ ನೆರೆ ಕಟ್ಟುವುದು, ರಾತ್ರಿ 9.10ಕ್ಕೆ ಕದಿರು ತೆಗೆಯುವುದು. ಸೇರಿದಂತೆ ವಿವಿಧ ಆಚರಣೆಗಳನ್ನು ಕೈಗೊಳ್ಳಲಾಯಿತು. ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು, ತಕ್ಕ ಮುಖ್ಯಸ್ಥರು ಹಾಗೂ ಹಾಗೂ ಭಕ್ತರು ಭಾಗವಹಿಸಿದ್ದರು.
ಸಮೀಪದ ನೆಲಜಿ ಗ್ರಾಮದ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿಂದ ಗುರುವಾರ ನಡೆಯಿತು.
ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ತುಲಾಭಾರ ಸೇವೆ ಬಳಿಕ ಭಕ್ತರು ವಿವಿಧ ರೀತಿಯ ಹರಕೆ ಸಲ್ಲಿಸಿದರು. ದೇವಾಲಯದಲ್ಲಿ ತುಲಾಭಾರ ಸೇವೆಗಳು, ಕಾಫಿ ಕಾಳುಮೆಣಸು, ಎಣ್ಣೆ, ಮತ್ತಿತರ ಹರಕೆ ಸಲ್ಲಿಸಿದರು.
ನಂತರ ದೇವಾಲಯದಲ್ಲಿ ಮಹಾಪೂಜೆ ಜರುಗಿತು. ಭಕ್ತರಿಗೆ ಪ್ರಸಾದ ವಿತರಣೆ ಬಳಿಕ ಎತ್ತುಪೋರಾಟ, ಅನ್ನಸಂತರ್ಪಣೆ ಬಳಿಕ ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ತಕ್ಕ ಮುಖ್ಯಸ್ಥರು, ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.
ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿದ ಭಕ್ತಸಮೂಹ ನೆರವೇರಿದ ವಿವಿಧ ಪೂಜಾ ವಿಧಿವಿಧಾನಗಳು ಭರ್ಜರಿಯಾಗಿ ನಡೆಯಿತು ಗೆಣಸುಗಳ ವ್ಯಾಪಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.