ADVERTISEMENT

ಪರವಾನಗಿ ಇಲ್ಲದ ಬಡಾವಣೆ; ಸಮಸ್ಯೆ ಅನುರಣನ!

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿಂದ ಹಲವು ದೂರುಗಳ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 11:25 IST
Last Updated 24 ಜನವರಿ 2023, 11:25 IST
ಮಡಿಕೇರಿಯಲ್ಲಿ ಸೋಮವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ತಮ್ಮ ವ್ಯಾಪ್ತಿಗೆ ಬರುವ ಪ್ರಕರಣಗಳ ವಿಚಾರಣೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕರ್ನಾಟಕ ಲೋಕಾಯುಕ್ತ ಜಿಲ್ಲಾ ರಿಜಿಸ್ಟ್ರಾರ್ ತನಿಖಾ ವಿಭಾಗದ ಹಿರಿಯ ನ್ಯಾಯಾಧೀಶರಾದ ಚೆನ್ನಕೇಶವ ರೆಡ್ಡಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇದ್ದಾರೆ
ಮಡಿಕೇರಿಯಲ್ಲಿ ಸೋಮವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ತಮ್ಮ ವ್ಯಾಪ್ತಿಗೆ ಬರುವ ಪ್ರಕರಣಗಳ ವಿಚಾರಣೆ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕರ್ನಾಟಕ ಲೋಕಾಯುಕ್ತ ಜಿಲ್ಲಾ ರಿಜಿಸ್ಟ್ರಾರ್ ತನಿಖಾ ವಿಭಾಗದ ಹಿರಿಯ ನ್ಯಾಯಾಧೀಶರಾದ ಚೆನ್ನಕೇಶವ ರೆಡ್ಡಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇದ್ದಾರೆ   

ಮಡಿಕೇರಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ತಮ್ಮ ವ್ಯಾಪ್ತಿಗೆ ಬರುವ ಪ್ರಕರಣಗಳ ವಿಚಾರಣೆ ನಡೆಸುವ ವೇಳೆ ಕೊಡಗು ಜಿಲ್ಲೆಯಲ್ಲಿ ಅನುಮತಿ ಪಡೆಯದೇ ನಿರ್ಮಿಸುತ್ತಿರುವ ಬಡಾವಣೆಗಳ ವಿಷಯ ಪ್ರಸ್ತಾಪವಾಯಿತು.

ಎಚ್.ಎಸ್.ಅಶೋಕ್ ಅವರು ಮಾತನಾಡಿ, ‘ಕುಶಾಲನಗರದಲ್ಲಿ ಎಲ್ಲೆಂದ ರಲ್ಲಿ ಖಾಸಗಿ ಬಡಾವಣೆಗಳು ನಿರ್ಮಾಣ ವಾಗುತ್ತಿದ್ದು, ಕೆಲವು ಬಡಾವಣೆ ಗಳನ್ನು ಅನುಮತಿ ಪಡೆ ಯದೆ ನಿರ್ಮಿಸಲಾಗಿದೆ’ ಎಂದು ಉಪ ಲೋಕಾಯುಕ್ತರ ಗಮನಕ್ಕೆ ತಂದರು.

ಬಡಾವಣೆ ನಿರ್ಮಿಸುವಾಗ ರಸ್ತೆ, ಚರಂಡಿ, ಉದ್ಯಾನವನ ಹೀಗೆ ಹಲವು ಮೂಲ ಸೌಲಭ್ಯಗಳನ್ನು ಒದಗಿಸಿಲ್ಲ ಎಂದೂ ದೂರಿದರು.

ADVERTISEMENT

‘ಗೋಣಿಕೊಪ್ಪಲುವಿನಲ್ಲೂ ಸಹ ನಾಗರಿಕ ಸೌಲಭ್ಯ ಕಲ್ಪಿಸದೆ ಹಾಗೂ ನಕ್ಷೆ ಅನುಮೋದನೆ ಪಡೆಯದೆ ಬಡಾವಣೆ ನಿರ್ಮಿಸಲಾಗಿದೆ’ ಎಂದು ವಿ.ಎಸ್.ಸೂರ್ಯ ಅವರು ಆರೋಪಿಸಿದರು.

ಈ ಕುರಿತು ಎಂಜಿನಿಯರ್ ಕಳುಹಿಸಿ ಪರಿಶೀಲಿಸಿ ವರದಿ ತರಿಸಿಕೊಳ್ಳಲಾಗು ವುದು ಎಂದು ಉಪಲೋಕಾಯುಕ್ತರು ಭರವಸೆ ನೀಡಿದರು.

ಮತ್ತೊಬ್ಬ ದೂರುದಾರರು ನಿವೃತ್ತಿ ವೇತನ ಮಂಜೂರು ಮಾಡಿಸಿ ಕೊಡುವಂತೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು ಕಾಲ ಮಿತಿಯಲ್ಲಿ ನಿವೃತ್ತಿ ವೇತನ ಭರಿಸಲಾಗುವುದು ಎಂದು ಹೇಳಿದರು.

ನಗರಸಭೆ ವ್ಯಾಪ್ತಿಯ ಸಬಿತಾ ಎಂಬುವವರು ರಿಮ್ಯಾಂಡ್ ಹೋಂ ಬಳಿ ಮನೆ ಇದ್ದು, ಮನೆಗೆ ಓಡಾಡಲು ತುಂಬಾ ತೊಂದರೆಯಾಗಿದೆ. ಈ ಬಗ್ಗೆ ನಗರಸಭೆಗೆ ಮನವಿ ಮಾಡಲಾಗಿದೆ ಎಂದು ಉಪಲೋಕಾಯುಕ್ತರ ಗಮ ನಕ್ಕೆ ತಂದರು. ಈ ಕುರಿತು ಸಮಸ್ಯೆ ಪರಿ ಹಾರವಾದ ನಂತರ ವರದಿ ಸಲ್ಲಿಸುವಂತೆ ಅಧಿಕಾರಿಗೆ ನಿರ್ದೇಶನ ನೀಡಿದರು.

ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಹೇಮಾವತಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಒಂದು ವಾರಕ್ಕೆ ಖಾತೆ ಮಾಡಿಕೊಟ್ಟರು ಎಂದು ಲೋಕಾ ಯುಕ್ತದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕರ್ನಾಟಕ ಲೋಕಾಯುಕ್ತ ಜಿಲ್ಲಾ ರಿಜಿಸ್ಟ್ರಾರ್ ತನಿಖಾ ವಿಭಾಗದ ಹಿರಿಯ ನ್ಯಾಯಾಧೀಶ ಚೆನ್ನಕೇಶವ ರೆಡ್ಡಿ, ಕರ್ನಾಟಕ ಲೋಕಾಯುಕ್ತದ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ನಾರಾಯಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಲೋಕಾಯುಕ್ತ ಎಸ್.ಪಿ. ಸುರೇಶ್ ಬಾಬು, ಮೈಸೂರು ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೃಷ್ಣಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.