ಮಡಿಕೇರಿ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾಡಳಿತವು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದೆ.
‘ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ.’ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ (ಭಾರತ ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಹಿನ್ನಲೆಯಲ್ಲಿ)’ ಸ್ಪರ್ಧೆಯು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತವಾಗಿ ನಡೆಯಲಿದೆ.
ಪ್ರಬಂಧ ಸ್ಪರ್ಧೆಗೆ ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ಸ್ಫುಟವಾದ ಕೈಬರಹಗಳಲ್ಲಿ ‘ಎ4’ ಅಳತೆಯ ಕಾಗದಗಳಲ್ಲಿ 1,500 ಪದಗಳಿಗೆ ಮೀರದಂತೆ ಬರೆದು ಕಳುಹಿಸಬೇಕು.
ಚಿತ್ರಕಲಾ ಸ್ಪರ್ಧೆಗೆ ಸಂಬಂಧಿಸಿದಂತೆ ನೀಡಿರುವ ವಿಷಯಗಳ ಬಗ್ಗೆ ‘ಎ3’ ಅಳತೆಯ ಡ್ರಾಯಿಂಗ್ ಶೀಟ್‍ನಲ್ಲಿ ಚಿತ್ರ ರಚನೆ ಮಾಡಿ ಸಲ್ಲಿಸಬೇಕು.
ಪ್ರಬಂಧ ಸ್ಪರ್ಧೆಯ ಪ್ರಬಂಧಗಳನ್ನು ಹಾಗೂ ಚಿತ್ರಕಲಾ ಸ್ಪರ್ಧೆಯ ಚಿತ್ರಗಳನ್ನು ಫೆ. 25 ರಂದು ಸಂಜೆ 4.30 ರ ಒಳಗೆ ‘ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ ಹತ್ತಿರ, ಎಸ್.ಜಿ.ಎಸ್.ವೈ ಕಟ್ಟಡ, ಕೊಡಗು ಜಿಲ್ಲೆ, ಮಡಿಕೇರಿ. ದೂ: 08272-225531 ಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ತಲುಪಿಸಬೇಕು.
ಕೊನೆಯ ದಿನಾಂಕದ ನಂತರ ಬರುವ ಪ್ರಬಂಧಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಪ್ರಥಮ ₹ 5 ಸಾವಿರ, ದ್ವಿತೀಯ ₹ 3 ಸಾವಿರ ಹಾಗೂ ತೃತೀಯ ₹ 2 ಸಾವಿರ ನಗದು ಬಹುಮಾನ ನೀಡಲಾಗುವುದು. ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಮಾಹಿತಿಗೆ ದೂ: 08272-225531 ಪ್ರಥಮ ಬಹುಮಾನ ₹ 5 ಸಾವಿರ, ದ್ವಿತೀಯ ₹ 3 ಸಾವಿರ, ತೃತೀಯ ₹ 2 ಸಾವಿರ ನಗದು ಬಹುಮಾನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.