ಮಡಿಕೇರಿ: ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ ಮೇ 21ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಶಾಸಕ ಡಾ.ಮಂತರ್‌ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಬಿ.ವೈ.ರಾಜೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಮಂದ್ರಿರ ಮೋಹನದ್ ದಾಸ್, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ದೀಪಾ ಚೋಳನ್, ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.