
ಪ್ರಜಾವಾಣಿ ವಾರ್ತೆ
ಸೋಮವಾರಪೇಟೆ: ಸಮೀಪದ ಶಾಂತಳ್ಳಿ ಅಂಗನವಾಡಿ ಶಿಕ್ಷಕಿ ಹಾಗೂ ಬೂತ್ ಮಟ್ಟದ ಅಧಿಕಾರಿ ಎಂ.ಎಲ್.ಇಂದಿರಾವತಿ ಅವರಿಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದ ಅತ್ಯುತ್ತಮ ಶ್ರೇಷ್ಠತೆಯ ಕಾರ್ಯಕ್ಷಮತೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಜ್ಯದಾದ್ಯಂತ ಚುನಾವಣಾ ತಯಾರಿಯ ಪೂರ್ವ ಸಿದ್ಧತೆಯ ಭಾಗವಾಗಿ ಮತದಾರರ ಗುರುತಿನ ಚೀಟಿ, ಸಮೀಕ್ಷೆ, ಸೇರ್ಪಡೆ, ತಿದ್ದುಪಡಿ ಸೇರಿದಂತೆ ಚುನಾವಣಾ ಆಯೋಗ ನೀಡಿದ ಜವಾಬ್ದಾರಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಬಿಎಲ್‌ಒಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಲಾಗಿದೆ. ಕೊಡಗು ಜಿಲ್ಲೆಯಿಂದ ಇಂದಿರಾವತಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಸರ್.ಪುಟ್ಟಣಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ್ದ 16ನೇ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್, ಮುಖ್ಯ ಆಯುಕ್ತ ಎಂ.ಮಹೇಶ್ವರರಾವ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.