ವಿರಾಜಪೇಟೆ: ಪೂರ್ವಜರು ನೀಡಿರುವ ಕೊಡುಗೆಯನ್ನು ಗಮನದಲ್ಲಿರಿಸಿಕೊಂಡು ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವಂತವಾಗಿರಿಸಬೇಕು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅಬಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಕೊಡವ ಸಮಾಜದಲ್ಲಿ, ಕಾವೇರಿ ಕೊಡವ ಕೇರಿ ಮತ್ತು ವಿರಾಜಪೇಟೆ ಕೊಡವ ಸಂಘ ಒಕ್ಕೂಟದ ಆಶ್ರಯದಲ್ಲಿ ಭಾನುವಾರ ನಡೆದ ಅಂತರ ಕೊಡವ ಕೇರಿಗಳ ನಡುವಿನ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪರಂಪರೆಯಿಂದ ಬಂದಿರುವ ಕೊಡವರ ಆಚಾರ ಮತ್ತು ಸಂಸ್ಕೃತಿ ನೆಲೆ ನಿಲ್ಲಲು ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕವಾಗಿದೆ. ಕ್ರೀಡೆಗಳಿಗೆ ಗೌರವ ನೀಡಿ, ಒಂದೇ ಕ್ರೀಡೆಗೆ ಒತ್ತು ನೀಡದೇ ವಿವಿಧ ಕ್ರೀಡೆಗಳನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಮಾತನಾಡಿ ಕೊಡವ ಕೇರಿಗಳ ಮಧ್ಯೆ ಇಂತಹ ಕ್ರೀಡೆಗಳನ್ನು ಆಯೋಜಿಸಿರುವುದರಿಂದ ಭ್ರಾತೃತ್ವದ ಬಂಧಗಳನ್ನು ಬೀಗಿಗೊಳಿಸುತ್ತದೆ ಎಂದರು.
ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕಾವೇರಿ ಕೊಡವ ಕೇರಿ ಅಧ್ಯಕ್ಷ ಮೇರಿಯಂಡ ಅರಸು ಅಚ್ಚಪ್ಪ, ವಿರಾಜಪೇಟೆ ಕೊಡವ ಸಂಘ ಒಕ್ಕೂಟದ ಅಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ವಿರಾಜಪೇಟೆ ಕೊಡವ ಸಮಾಜ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಬೆಂಗಳೂರು ಕೊಡವ ಸಮಾಜ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಾಂಡ ಎ. ಗಣಪತಿ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಅಮ್ಮತ್ತಿ ಕೊಡವ ಸಮಾಜ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ಪುದಿಯೊಕ್ಕಡ ಕಾಶಿ ಕರುಂಬಯ್ಯ, ನಾಪೊಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ ಮಾತನಾಡಿದರು.
ಅಂತರ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಪೊನ್ನಪ್ಪ, ಕರಾಟೆ ಪಟು ಮತ್ತು ತರಬೇತಿದಾರರಾದ ಕರ್ಣಂಡ ಸೋಮಣ್ಣ, ಕ್ರೀಡಾ ಕ್ಷೇತ್ರದ ತಾಂತ್ರಿಕ ಶಿಕ್ಷಣದ ಪ್ರಮುಖರಾದ ನೆರವಂಡ ಸುರೇಶ್ ಬಿ. ಅವರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದ ವಿಜೇತ ಪಟುಗಳಿಗೆ ಟ್ರೋಫಿ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಯಿತು. ಪಟ್ಟಣದ 7 ಕೊಡವ ಕೇರಿಗಳ ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.