ADVERTISEMENT

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಸಂವಿಧಾನ ಪ್ರಸ್ತಾವನೆ ಓದಿದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 3:13 IST
Last Updated 16 ಸೆಪ್ಟೆಂಬರ್ 2024, 3:13 IST
ಸೋಮವಾರಪೇಟೆಯಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸರ್ಕಾರಿ ನೌಕರರು ಸಂವಿಧಾನ ಪ್ರಸ್ತಾವನೆ ಓದಿದರು
ಸೋಮವಾರಪೇಟೆಯಲ್ಲಿ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಸರ್ಕಾರಿ ನೌಕರರು ಸಂವಿಧಾನ ಪ್ರಸ್ತಾವನೆ ಓದಿದರು   

ಸೋಮವಾರಪೇಟೆ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ಜೇಸಿ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ವಿವಿಧ ಶಾಲಾ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆ ಓದಿದರು. ನಂತರ ಜೇಸಿ ವೇದಿಕೆಯಿಂದ ಕಕ್ಕೆಹೊಳೆಯ ತನಕ ಮಾನವ ಸರಪಳಿ ರಚಿಸಿ ಜಯಘೋಷ ಹಾಕಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಬಾಣಾವಾರ ರಸ್ತೆಯ ಡಾ. ಅಂಬೇಡ್ಕರ್ ಪ್ರತಿಮೆಯ ಪಕ್ಕದಲ್ಲಿ ಸಸಿ ನೆಡಲಾಯಿತು.

ADVERTISEMENT

ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಎಸಿಎಫ್ ಗೋಪಾಲ್, ಪ್ರಮುಖರಾದ ಬಿ.ಇ.ಜಯೇಂದ್ರ, ಡಿ.ಎಸ್.ನಿರ್ವಾಣಪ್ಪ, ಹೊನ್ನಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.