ಮಡಿಕೇರಿಯಲ್ಲಿ ಯೋಗ ದಿನಾಚರಣೆ
ಮಡಿಕೇರಿ: ಇಲ್ಲಿನ ಕೆಳಗಿನ ಗೌಡ ಸಮಾಜದಲ್ಲಿ ಶನಿವಾರ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆರಂಭವಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಮತ್ತು ಯೋಗ ತರಬೇತಿ ಸಂಸ್ಥೆಗಳ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಯೋಗ ತರಬೇತಿ ಸಂಸ್ಥೆಗಳಾದ ಯೋಗ ಭಾರತೀ, ಯೋಗ ಸಂಧ್ಯಾ, ಪತಂಜಲಿ ಯೋಗ ಶಿಕ್ಷಣ ಸಮಿತಿಗಳ ಯೋಗಪಟುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದಾರೆ.
ಶಾಸಕ ಡಾ.ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.