ADVERTISEMENT

ಕಲಾ ತಂಡ ಆಯ್ಕೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 6:08 IST
Last Updated 12 ಜುಲೈ 2025, 6:08 IST

ಮಡಿಕೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆ ಹಾಗೂ ಸಾಧನೆ ಕುರಿತು ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡ ಆಯ್ಕೆ ಮಾಡಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರಬೇಕು.

ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ಸರ್ಕಾರದ ವಿವಿಧ ಇಲಾಖೆಗಳ ಬೀದಿ ನಾಟಕ ಹಾಗೂ ಜಾನಪದ ಸಂಗೀತ ಜಾಗೃತಿ ಕಾರ್ಯಕ್ರಮ ನಡೆಸಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೋಂದಾಯಿತ ತಂಡವಾಗಿರಬೇಕು.

ADVERTISEMENT

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಕ ಸಂಪರ್ಕ ಇಲಾಖೆ, ವಾರ್ತಾ ಭವನ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 19 ರೊಳಗೆ ಸಲ್ಲಿಸಬೇಕು. ಆಗಸ್ಟ್ 12ರಂದು ಬೆಳಿಗ್ಗೆ 11 ಗಂಟೆಗೆ ಇಲಾಖೆ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.