– ಐಸ್ಟಾಕ್ ಚಿತ್ರ
ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 13ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಮಿನಿ ಉದ್ಯೋಗಮೇಳ’ ನಡೆಯಲಿದೆ.
ಇದರಲ್ಲಿ ಟೀಷರ್ ದಿ ಟೆಕ್ನಿಕಲ್ ಸರ್ವೀಸ್, ಕಲ್ಯಾಣಿ ಮೋಟಾರ್ಸ್, ಮುತ್ತೂಟ್ ಫೈನಾನ್ಸ್, ಅಪೋಲೋ ಫಾರ್ಮಸಿ, ತಾಜ್ ರೆಸಾರ್ಟ್ಸ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು.
ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಮನವಿ ಮಾಡಿದ್ದಾರೆ. ಮಾಹಿತಿಗೆ ಮೊಬೈಲ್ ಫೋನ್: 8296020826 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.