ADVERTISEMENT

ಕೊಡಗಿನ ಇಬ್ಬರಿಗೆ ಸಹಕಾರ ರತ್ನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2023, 5:49 IST
Last Updated 19 ನವೆಂಬರ್ 2023, 5:49 IST

ಮಡಿಕೇರಿ: ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಕೊಡಗಿನ ಜೆ.ಪಿ.ರಾಜು ಹಾಗೂ ಕೆ.ಎಂ.ಸೋಮಯ್ಯ ಆಯ್ಕೆಯಾಗಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ಮಾವಿನಹಳ್ಳಿ ಗಿರಿಜನ ಹಾಡಿಯ ಜೆ.ಪಿ.ರಾಜು ಅವರು ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾಮಂಡಳದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ವಿರಾಜಪೇಟೆಯ ಕೆ.ಎಂ.ಸೋಮಯ್ಯ ಅವರು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ADVERTISEMENT

ಸರ್ಕಾರ ರಾಜ್ಯಮಟ್ಟದಲ್ಲಿ ಒಟ್ಟು 71 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.