
Children celebrating at the learning festival
ಸುಂಟಿಕೊಪ್ಪ: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ ನಡೆಯಿತು.
ಸುಂಟಿಕೊಪ್ಪ ಕ್ಲಸ್ಟರ್ ಕೇಂದ್ರದ ವ್ಯಾಪ್ತಿಯ ವಿವಿಧ ಸರ್ಕಾರಿ ಮಾದರಿ ಕಲಿಕಾ ಹಬ್ಬವನ್ನು ಅಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಮತ್ತು ಗಣಿತ ವಿಷಯ ಸಂಬಂಧಿಸಿದ ಚಟುವಟಿಕೆ, ಪೌಷ್ಟಿಕಾಂಶಕ್ಕೆ ಸಂಬಂಧಿಸಿದ ಚಿತ್ರಗಳು, ಚಿತ್ರ ನೋಡಿ ಕಥೆ ಹೇಳುವುದು, ಬರವಣಿಗೆ ಸೇರಿದಂತೆ ವಿವಿಧ ಸ್ಪರ್ದೇಗಳು ನಡೆದವು. ನಂತರ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಸುಂಟಿಕೊಪ್ಪ ಗ್ರೇಡ್– 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಪಿಡಿಒ ವಿ.ಜೆ.ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಯು.ರಫೀಕ್‌ಖಾನ್, ಶಾಲಾ ಮುಖ್ಯೋಪಾದ್ಯಾಯರಾದ ಪಿ.ಇ.ನಂದ, ಸಹಶಿಕ್ಷಕಿ ಸೌಭಾಗ್ಯ, ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಸೀಮಾ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಶಿಕ್ಷಕರು ಪೋಷಕರು ಉಪಸ್ಥಿತರಿದ್ದರು.
ಸುಂಟಿಕೊಪ್ಪ ಕ್ಲಸ್ಟರ್ ಮಟ್ಟದ 10 ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.