
ಕುಶಾಲನಗರ: ಪಟ್ಟಣದ ರಥಬೀದಿಯಲ್ಲಿ ಬಟ್ಟೆ ಅಂಗಡಿಗೆ ಸಂಬಂಧಿಸಿದ ಬ್ಯಾನರ್ ಸಂಪೂರ್ಣ ಆಂಗ್ಲಭಾಷೆಯಲ್ಲಿರುವುದನ್ನು ಗಮನಿಸಿದ ಎಚ್.ಶಿವರಾಮೇಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಮತ್ತು ಪ್ರಮುಖರು ಬ್ಯಾನರ್ ಅನ್ನು ಸೋಮವಾರ ತೆರವುಗೊಳಿಸಿದರು.
ಕನ್ನಡ ಕಡ್ಡಾಯವಾಗಿ ಬಳಸಬೇಕಿದೆ ಎಂದು ಸರ್ಕಾರದ ಸೂಚನೆಯಿದ್ದರೂ ಕನ್ನಡ ಭಾಷೆ ಬಳಕೆಗೆ ಕನ್ನಡಿಗರು ಅಸಡ್ಡೆ ತೋರುತ್ತಿರುವ ಬಗ್ಗೆ ಅಂಗಡಿ ಮಾಲೀಕರನ್ನು ಕರವೇ ಪದಾಧಿಕಾರಿಗಳು ತರಾಟೆಗೆ ತೆಗೆದುಕೊಂಡರು.
ಪುರಸಭೆ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ದಂಡ ವಿಧಿಸಬೇಕಿದೆ. ಆಂಗ್ಲಭಾಷೆ ಬಳಕೆ ವಿರುದ್ಧ ಹಲವು ಬಾರಿ ಹೋರಾಟ ನಡೆಸಿದರು ಜನತೆ ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದು ದಿನೇಶ್ ಶೆಟ್ಟಿ ಆಗ್ರಹಿಸಿದರು.
ಕರವೇ ಜಿಲ್ಲಾ ಉಪಾಧ್ಯಕ್ಷ ಪುಟ್ಟಸ್ವಾಮಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್.ನಾಗರಾಜ್, ತಾಲ್ಲೂಕು ಸಂಚಾಲಕ ರಂಗಸ್ವಾಮಿ, ತಾಲ್ಲೂಕು ಸಹ ಕಾರ್ಯದರ್ಶಿ ಕಾರ್ತಿಕ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.