
ಪ್ರಜಾವಾಣಿ ವಾರ್ತೆ
ಮಡಿಕೇರಿ: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.
ಇಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಇದಕ್ಕೂ ಮುನ್ನ 20 ತಂಡಗಳು ಮೈದಾನದಲ್ಲಿ ಪಥಸಂಚಲನ ನಡೆಸಿದವು. 8 ಶಾಲೆಯ ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.