ADVERTISEMENT

ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಘಟಕ ಉದ್ಘಾಟನೆ ಇಂದು

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 5:46 IST
Last Updated 26 ಜುಲೈ 2025, 5:46 IST

ಸೋಮವಾರಪೇಟೆ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಘಟಕದ ಉದ್ಘಾಟನಾ ಕಾರ್ಯಕ್ರಮ ಇಲ್ಲಿನ ಪತ್ರಿಕಾ ಭವನದಲ್ಲಿ ಜುಲೈ 26ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ವೇದಿಕೆಯ ರಾಜ್ಯ ಸಮಿತಿ ಖಜಾಂಚಿ ಎಚ್‌.ಎಸ್.ಬಸವರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಜಲಾ ಕಾಳಪ್ಪ ವಹಿಸಲಿದ್ದಾರೆ. ತಾಲ್ಲೂಕು ಘಟಕದ ಅಧ್ಯಕ್ಷೆ ಶರ್ಮಿಳಾ ರಮೇಶ್ ಹಾಗೂ ಕಾರ್ಯದರ್ಶಿ ಹೇಮಂತ್ ಪಾರೇರ ಹಾಗೂ ಸಮಿತಿಯವರಿಗೆ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ರಘು ಅಧಿಕಾರ ಹಸ್ತಾಂತರಿಸಲಿದ್ದಾರೆ.

ಹಿರಿಯ ಸಾಹಿತಿ ನ.ಲ. ವಿಜಯ, ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಎಚ್.ಜೆ. ಜವರಪ್ಪ, ಉಪಾಧ್ಯಕ್ಷೆ ರಾಣಿ ರವೀಂದ್ರ, ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷ ದಿನೇಶ್ ಆಚಾರಿ ಭಾಗವಹಿಸುವರು ಎಂದು ಮಹಿಳಾ ಘಟಕದ ಕಾರ್ಯದರ್ಶಿ ಕೆ.ಎಸ್. ದೀಪಿಕಾ ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.