ಗೋಣಿಕೊಪ್ಪಲು: ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಅಲಿಮಾ ಅವರಿಗೆ ಬೆಂಗಳೂರಿನ ಕರ್ನಾಟಕ ಮೀಡಿಯ ಕ್ಲಬ್ ಕರ್ನಾಟಕ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಅಲಿಮಾ ಅವರು ದೈಹಿಕ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿರುವುದರ ಜತೆಗೆ ರಾಷ್ಟ್ರೀಯ ಯೋಗ ತರಬೇತಿದಾರರೂ ಆಗಿದ್ದಾರೆ. ಇವರ ಸಾಧನೆಯನ್ನು ಗುರುತಿಸಿದ ಮೀಡಿಯ ಕ್ಲಬ್ ಅಧ್ಯಕ್ಷ ಎಂ.ದಯಾನಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಶನಿವಾರ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಬಸವಾರಮಾನಂದ ಸ್ವಾಮೀಜಿ, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಪ್ರಧಾನ ಕಾರ್ಯದರ್ಶಿ ರಮೇಶ್, ಪದ್ಮಶ್ರೀ ಪ್ರಶಸ್ತಿ ಪುರಷ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.