ಮಡಿಕೇರಿ: ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದ ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಎಮ್ಮೆಗುಂಡಿ ಕ್ಷೇತ್ರದ ಅಭ್ಯರ್ಥಿ ಪುಲಿಯಂಡ ಬೋಪಣ್ಣ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯುಸೂಫ್ ವಿರುದ್ಧ 61 ಮತಗಳ ಅಂತರದಿಂದ ಜಯಿಸಿದ್ದಾರೆ. ಬೋಪಣ್ಣ ಬಿಜೆಪಿ ಬೆಂಬಲಿತ ಅಭ್ಯರ್ಥಿ.
ಜಾತಿ ನಿಂದನೆ ಪ್ರಕರಣದಲ್ಲಿ ಇವರು ನ್ಯಾಯಾಂಗ ಬಂಧನದಲ್ಲಿದ್ದರು. ಖುದ್ದು ನಾಮಪತ್ರ ಸಲ್ಲಿಸಲು ಅವಕಾಶ ಆಗಿರಲಿಲ್ಲ. ತಮ್ಮ ಬೆಂಬಲಿಗರೊಬ್ಬರು ನಾಮಪತ್ರ ಸಲ್ಲಿಸಿದ್ದರು. ಬಳಿಕ ಜಾಮೀನು ಸಿಕ್ಕಿ, ಎರಡು ದಿನ ಪ್ರಚಾರ ನಡೆಸಿದ್ದರು. ಈ ಹಿಂದೆ ಅವರು 12 ವರ್ಷ ಪಾಲಿಬೆಟ್ಟ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಅವಧಿಯಲ್ಲಿ ಗ್ರಾಮ ಪಂಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರವೂ ಲಭಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.