ADVERTISEMENT

ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಒಂದು ಮೃತದೇಹ ಪತ್ತೆ

ಎನ್‌ಡಿಆರ್‌ಎಫ್‌ ಕಾರ್ಯಾಚರಣೆ, ಇನ್ನೂ ನಾಲ್ವರಿಗೆ ಹುಡುಕಾಟ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 10:43 IST
Last Updated 8 ಆಗಸ್ಟ್ 2020, 10:43 IST
ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಎನ್‌ಡಿಆರ್‌ಎಫ್ ಕಾರ್ಯಾಚರಣೆ
ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಎನ್‌ಡಿಆರ್‌ಎಫ್ ಕಾರ್ಯಾಚರಣೆ   
""

ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿತವಾಗಿರುವ ಸ್ಥಳದಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಎನ್‌ಡಿಆರ್‌ಎಫ್‌ ಕಾರ್ಯಾಚರಣೆ ಆರಂಭಿಸಿದ್ದು ಒಂದು ಮೃತದೇಹ ಪತ್ತೆಯಾಗಿದೆ.

ಕ್ಷೇತ್ರದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್‌ ಅವರ ಅಣ್ಣ ಆನಂದ ತೀರ್ಥ ಸ್ವಾಮಿ (86) ಅವರ ಮೃತದೇಹವೆಂದು ಗುರುತಿಸಲಾಗಿದೆ. ಇನ್ನೂ ಕಣ್ಮರೆಯಾದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ತಲಕಾವೇರಿ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದು ಕುಸಿದ ಬೆಟ್ಟದ ಸ್ಥಳದ ಕೆಸರು ಮಣ್ಣಿನ ನಡುವೆ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ಸಾಗುತ್ತಿದೆ. ಸ್ಥಳವು ಅತ್ಯಂತ ಅಪಾಯಕಾರಿಯಾಗಿದೆ. ಹಗ್ಗದ ನೆರವು ಪಡೆದು ಭೂಕುಸಿತ ಸ್ಥಳದಲ್ಲಿ ರಕ್ಷಣಾ ಪಡೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ADVERTISEMENT

ಭಾಗಮಂಡಲದಲ್ಲೂ ನೀರಿನ ಪ್ರಮಾಣ ಇಳಿಯುತ್ತಿದೆ. ನೀರಿನ ಪ್ರಮಾಣ ಇಳಿದಿರುವ ಕಾರಣ ಜೆಸಿಬಿಯನ್ನು ತಲಕಾವೇರಿ ತರಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿ ತನಕವು ರಸ್ತೆಯಲ್ಲಿ ಕುಸಿದಿದ್ದ ಮಣ್ಣನ್ನು ತೆರವು ಮಾಡಲಾಗಿದೆ.

ಆನಂದ ತೀರ್ಥ ಸ್ವಾಮಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.