ADVERTISEMENT

ಕೊಡಗಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 8:18 IST
Last Updated 25 ಜುಲೈ 2025, 8:18 IST
   

ಮಡಿಕೇರಿ: ಕೊಡಗು ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಹಲವೆಡೆ ಪರಿಶೀಲನೆ ನಡೆಸಿದರು.

ಪೊನ್ನಂಪೇಟೆ ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿದ್ದ ಕೆಲಸಗಳನ್ನು ಪರಿಶೀಲಿಸಿದರು. ಸಿಬ್ಬಂದಿಯೊಂದಿಗೆ ಮಾತನಾಡಿ ವಿವರ ಪಡೆದರು.

ಬಳಿಕ ಅವರು, ಬಲ್ಯಮಂಡೂರು ಬಳಿಯ ಸೇತುವೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ADVERTISEMENT

ಈ ವೇಳೆ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.