ADVERTISEMENT

Karnataka Rains | ಕೊಡಗಿನಲ್ಲಿ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 23:30 IST
Last Updated 4 ಸೆಪ್ಟೆಂಬರ್ 2025, 23:30 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಭಾನುವಾರವೂ ಮಳೆ ಮುಂದುವರಿದಿದೆ.

ಮಡಿಕೇರಿ ನಗರದಲ್ಲಿ ಬಿರುಗಾಳಿ ಸಹಿತ ಜೋರು ಮಳೆಯಾಯಿತು. ಸೋಮವಾರಪೇಟೆ, ಸುಂಟಿಕೊಪ್ಪ, ಗೋಣಿಕೊಪ್ಪಲು ಭಾಗಗಳಲ್ಲಿ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದೆ. ಕುಶಾಲನಗರ ತಾಲ್ಲೂಕಿನಲ್ಲಿ ಮನೆಯ ಕೊಟ್ಟಿಗೆಯೊಂದು ಕುಸಿದಿದೆ. ಶಿಥಿಲಗೊಂಡಿರುವ ಮನೆಗಳಲ್ಲಿ ವಾಸವಿರುವವರು ಆತಂಕದಿಂದಲೇ ದಿನದೂಡುತ್ತಿದ್ದಾರೆ.

ADVERTISEMENT

ಶಾಂತಳ್ಳಿಯಲ್ಲಿ 9 ಸೆಂ.ಮೀ., ಭಾಗಮಂಡಲದಲ್ಲಿ 8 ಸೆಂ.ಮೀ., ಸಂಪಾಜೆ 6, ಶ್ರೀಮಂಗಲ, ಹುದಿಕೇರಿ ತಲಾ 5, ಮಡಿಕೇರಿಯಲ್ಲಿ 4 ಸೆಂ.ಮೀ. ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.