ADVERTISEMENT

ಕೊಡಗಿನಲ್ಲಿ‌ ನಿರಂತರ ಮಳೆ: ಭಾಗಮಂಡಲ- ನಾಪೋಕ್ಲು ರಸ್ತೆ ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 7:45 IST
Last Updated 3 ಜುಲೈ 2022, 7:45 IST
ಕೊಡಗಿನಲ್ಲಿ‌ ಮಳೆ
ಕೊಡಗಿನಲ್ಲಿ‌ ಮಳೆ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ ‌ಇಲ್ಲಿನ ಮಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಸೆಂ.ಮೀನಷ್ಟು ಮಳೆ ದಾಖಲಾಗಿದೆ.

ಭಾಗಮಂಡಲದಲ್ಲಿ ಧಾರಾಕಾರ ಮಳೆ ಸುರಿಸಿದಿರುವುದರಿಂದ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ‌. ಭಾಗಮಂಡಲ- ನಾಪೋಕ್ಲು ರಸ್ತೆಯಲ್ಲಿ ನೀರು ಹರಿಯುತ್ತಿದೆ. ಅಲ್ಲಲ್ಲಿ ಜಲಾವೃತವಾಗಿರುವುದರಿಂದ ಭಾನುವಾರ ಬೆಳಿಗ್ಗೆಯಿಂದ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ಮೊಣ್ಣಂಗೇರಿಯಿಂದ ವಿವೇಕಗಿರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮಣ್ಣು ಕುಸಿದಿದೆ. ಇದರಿಂದ ಸಂಚಾರಕ್ಕೆ ಅಡಚಣೆಯಾಗಿದೆ.

ಗಾಳಿಬೀಡುವಿನಲ್ಲಿ 16, ಭಾಗಮಂಡಲದಲ್ಲಿ 13, ಪೆರಾಜೆ, ಬೆಟ್ಟದಹಳ್ಳಿಯಲ್ಲಿ‌11, ಕರಿಕೆ 9, ಮಡಿಕೇರಿ ನಗರದಲ್ಲಿ 8 ಸೆಂ.ಮೀನಷ್ಟು ಮಳೆ ಕಳೆದ 12 ಅವಧಿಯಲ್ಲಿ ಸುರಿದಿದೆ.

ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ಮೊಣ್ಣಂಗೇರಿಯಿಂದ ವಿವೇಕಗಿರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮಣ್ಣಕುಸಿದಿರುವುದು.

ಗಾಳಿಯಿಂದ ಮುರಿದ ವಿದ್ಯುತ್ ಕಂಬಗಳು, ಮರಗಳು ಧರೆಗೆ
ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಶನಿವಾರ ರಾತ್ರಿ ಇಡೀ ಬೀಸಿದ ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರೆ, ಕೆಲವೆಡೆ ಮರಗಳು ಧರೆಗುರುಳಿವೆ.

ಅಮ್ಮತ್ತಿ, ಮಾದಾಪುರ, ಗರಗಂದೂರು, ಕೂಡಿಗೆ ಸೇರಿದಂತೆ ವಿವಿಧ ಕಡೆಗಳಲ್ಲಿ ಹಾನಿ ಸಂಭವಿಸಿವೆ. ತುರ್ತು ಸ್ಪಂದನಾ ತಂಡಗಳು ಕಾರ್ಯಾಚರಣೆ ನಡೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT