ADVERTISEMENT

ಕೊಡಗು: ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ‌ ರಜೆ‌ ಘೋಷಣೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 6:26 IST
Last Updated 7 ಜುಲೈ 2022, 6:26 IST
ಕುಶಾಲನಗರ ತಾಲ್ಲೂಕಿನ ಕಣಿವೆ ಗ್ರಾಮದ ಶ್ರೀರಾಮಲಿಂಗೇಶ್ವರ ಕ್ಷೇತ್ರದ ಕಾವೇರಿ– ಹಾರಂಗಿ ನದಿಗಳ ಸಂಗಮ ಸ್ಥಳದಲ್ಲಿನ ನದಿ ಸ್ಥಿತಿಯನ್ನು ಕಂದಾಯ ಸಚಿವ ಆರ್.ಅಶೋಕ್ ಪರಿಶೀಲಿಸಿದರು
ಕುಶಾಲನಗರ ತಾಲ್ಲೂಕಿನ ಕಣಿವೆ ಗ್ರಾಮದ ಶ್ರೀರಾಮಲಿಂಗೇಶ್ವರ ಕ್ಷೇತ್ರದ ಕಾವೇರಿ– ಹಾರಂಗಿ ನದಿಗಳ ಸಂಗಮ ಸ್ಥಳದಲ್ಲಿನ ನದಿ ಸ್ಥಿತಿಯನ್ನು ಕಂದಾಯ ಸಚಿವ ಆರ್.ಅಶೋಕ್ ಪರಿಶೀಲಿಸಿದರು   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ರಾತ್ರಿ ಇಡಿ ಭಾರಿ ಮಳೆ ಸುರಿದಿದ್ದು ಗುರುವಾರವೂ ಮುಂದುವರಿದಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇಲ್ಲಿಗೆ ಸಮೀಪದ ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 15 ಸೆಂ.ಮೀನಷ್ಟು ಮಳೆ ಬಿದ್ದಿದೆ. ಕಂದಾಯ ಸಚಿವ ಆರ್.ಅಶೋಕ್ ಜಿಲ್ಲೆಯಲ್ಲೆ ಇದ್ದು, ಮಣ್ಣು ಕುಸಿದಿರುವ ಹಾಗೂ ಪದೇ ಪದೇ ಭೂಕಂಪ ಸಂಭವಿಸುವ ಚೆಂಬು ಸೇರಿದಂತೆ ಇತರ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, 15,580 ಕ್ಯುಸೆಕ್ ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT