ADVERTISEMENT

ಕೊಡಗು: ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 6:25 IST
Last Updated 11 ಸೆಪ್ಟೆಂಬರ್ 2022, 6:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಶನಿವಾರ ರಾತ್ರಿಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಬಿಡುವು ನೀಡದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ತಾಲ್ಲೂಕಿನ ಮದೆ ಮತ್ತು ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಾಗಿ ಮಳೆ ಸುರಿದಿದ್ದು ತಲಾ 9 ಸೆಂ.ಮೀನಷ್ಟು ಮಳೆ ದಾಖಲಾಗಿದೆ. ಉಳಿದಂತೆ, ಮಡಿಕೇರಿಯಲ್ಲಿ 6, ಚೆಂಬು ಗ್ರಾಮ ಪಂಚಾಯಿತಿಯಲ್ಲಿ 4 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ. ಜಿಲ್ಲೆಯ ಉಳಿದ ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.