ಕೊಡಗು ಜಿಲ್ಲೆಯ ಕುಶಾಲನಗರದ ಸಾಯಿಬಾಬ ದೇಗುಲ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ, ಗಾಳಿ ಮುಂದುವರಿದಿದೆ. ಗುರುವಾರ ರಾತ್ರಿ ಇಡೀ ತೀವ್ರ ಸ್ವರೂಪದಲ್ಲಿ ಗಾಳಿ ಬೀಸಿತು. ಬಿರುಸಿನ ಮಳೆ ಶುಕ್ರವಾರವೂ ಮುಂದುವರಿದಿದೆ.
ಮೈಸೂರು- ಕುಶಾಲನಗರ ಸಂಪರ್ಕ ಕಲ್ಪಿಸುವ ಕೊಪ್ಪ ಸೇತುವೆಯ ಬಳಿ ಕಾವೇರಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಸೇತುವೆ ತಲುಪಲು ಕೆಲವೇ ಅಡಿಗಳಷ್ಟು ಬಾಕಿ ಉಳಿದಿದೆ.
ಕುಶಾಲನಗರದ ಸಾಯಿಬಡಾವಣೆಗೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡುತ್ತಿದ್ದಾರೆ. ಸಾಯಿಬಾಬಾ ದೇಗುಲದ ಸುತ್ತ ನೀರು ಆವರಿಸಿದೆ. ಕ್ಷಣ ಕ್ಷಣಕ್ಕೂ ಕಾವೇರಿ ನದಿ ನೀರಿನ ಮಟ್ಟ ಏರುತ್ತಲೇ ಇದ್ದು, ನದಿ ದಂಡೆಯ ನಿವಾಸಿಗಳ ಆತಂಕ ಹೆಚ್ಚಿದೆ.
ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಹಾಗೆಯೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.