ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ.
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಿಗ್ಗೆಯವರೆಗೂ ಗಾಳಿ ಮಳೆ ಅಬ್ಬರಿಸಿದೆ.
ಅಮ್ಮತ್ತಿ ಹೋಬಳಿಯ ಪುಲಿಯೇರಿ ಗ್ರಾಮದ ಶ್ರೀಜಾ ಎಂಬುವವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ. ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದಿದೆ.
ಸೋಮವಾರಪೇಟೆ ಹೋಬಳಿ ಹರದೂರು ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾಗಿದೆ. ಕಟ್ಟಡದ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದ ಶೌಚಾಲಯ ಕಟ್ಟಡವು ಸಹ ಹಾನಿಯಾಗಿದೆ.
ಶನಿವಾರಸಂತೆ ಹೋಬಳಿ ಮಾದೆಗೋಡು ಗ್ರಾಮದ ನಿವಾಸಿ ಎಂ ಎನ್ ದಿವಾಕರ ಅವರ ಮನೆ ಮಳೆಯಿಂದ ಕುಸಿದಿದೆ.
ಸುಂಟಿಕೊಪ್ಪ ಹೋಬಳಿ ಉಳುಗುಲಿ ಗ್ರಾಮದ ಎನ್ ಆರ್ ನಂಜಪ್ಪ ಅವರ ಮನೆ ಮೇಲೆ ಮರ ಬಿದ್ದು, ಹಾನಿಯಾಗಿದೆ.
ನಾಪೋಕ್ಲು ಹೋಬಳಿ ಎಮ್ಮೆಮಾಡು ಗ್ರಾಮದ ಕರೀಂ ಅವರ ಮನೆಯ ಮುಂಭಾಗದ ಗೋಡೆ ಕುಸಿದಿದೆ.
ಹರಿಹರ-ಬಲ್ಯಮಂಡೂರು ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ಹಲವೆಡೆ ಮಣ್ಣು ಕುಸಿತದಂತಹ ಘಟನಗಳು ಸಂಭವಿಸಿವೆ. ಗುಡ್ಡದ ಮೇಲೆ, ಗುಡ್ಡದ ಕೆಳಗೆ ವಾಸಿಸುತ್ತಿರುವವರಲ್ಲಿ ಸುರಿಯುತ್ತಿರುವ ಮಳೆ ಆತಂಕ ತರಿಸಿದೆ.
ಮನೆ ಮೇಲೆ ವಿದ್ಯುತ್ ಕಂಬ ಬಿದ್ದು ಹಾನಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.