ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿಗಳೂ ಸೇರಿದಂತೆ ಹಳ್ಳ– ಕೊಳ್ಳಗಳು ಮತ್ತಷ್ಟು ಅಪಾಯಕಾರಿಯಾಗಿ ಹರಿಯುತ್ತಿವೆ. ಕುಶಾಲನಗರದ ಸಾಯಿ ಬಡಾವಣೆ ಹಾಗೂ ಕುವೆಂಪು ಬಡಾವಣೆಗಳು ಪ್ರವಾಹದಲ್ಲಿ ಮುಳುಗಿವೆ. ಎರಡು ಬಡಾವಣೆ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.