ಮಡಿಕೇರಿ: ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದ್ದ 34 ಎಮ್ಮೆ, ಕೋಣಗಳನ್ನು ಪೊಲೀಸರು ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಸಮೀಪ ವಶಪಡಿಸಿಕೊಂಡಿದ್ದಾರೆ.
‘ರಾತ್ರಿ ವೇಳೆ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಗೋಣಿಕೊಪ್ಪಲು ಸಮೀಪದ ಮತ್ತಿಗೋಡು ಆನೆ ಶಿಬಿರದ ಬಳಿ ನಮ್ಮನ್ನು ನೋಡುತ್ತಲೇ ವಾಹನ ನಿಲ್ಲಿಸಿ ಚಾಲಕ ಪರಾರಿಯಾದ. 19 ದೊಡ್ಡ ಕೋಣ, ಎಮ್ಮೆ, 15 ಎಮ್ಮೆ ಕರುಗಳು ಪತ್ತೆಯಾದವು. ವಾಹನದ ಮಾಲೀಕ, ಚಾಲಕನಿಗಾಗಿ ಶೋಧ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.