ADVERTISEMENT

ಕೊಡಗು ಬಲಿಜ ಸಮಾಜದ ವಿದ್ಯಾರ್ಥಿ ವೇತನ ವಿತರಣೆ 15 ರಂದು

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 15:48 IST
Last Updated 13 ಜೂನ್ 2025, 15:48 IST

ಗೋಣಿಕೊಪ್ಪಲು; ಕೊಡಗು ಬಲಿಜ ಸಮಾಜದ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಬಲಿಜ ವಿದ್ಯಾರ್ಥಿ ವೇತನ ಜು.15 ರಂದು ವಿತರಿಸಲಾಗುವುದು ಎಂದು ಬಲಿಜ ಸಮಾಜದ ಅಧ್ಯಕ್ಷ ಟಿ.ಎಲ್.ಶ್ರೀನಿವಾ ನಾಯ್ಡು ಹೇಳಿದರು.

ಪೊನ್ನಂಪೇಟೆ ಸಾಯಿ ಶಂಕರ ವಿದ್ಯಾಸಂಸ್ಥೆ ಸಮೀಪ ಕೇವ್ ಇನ್ ಸಭಾಂಗಣದಲ್ಲಿ ಬೆಳಿಗ್ಗೆ 10. 30 ಕ್ಕೆ ಜರುಗುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಬಲಿಜ ಸಮಾಜ ಉಪಾಧ್ಯಕ್ಷೆ ಹಾಗೂ ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಎ.ಎಸ್.ಪೊನ್ನಣ್ಣ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಡಿವೈಎಸ್ ಪಿ ಎಸ್.ಮಹೇಶ್ ಕುಮಾರ್,ಧರ್ಮದರ್ಶಿ ಡಾ.ಬಿ.ಎಂ.ರವಿನಾಯ್ಡು, ರಾಜ್ಯ ಸಮಗ್ರ ಬಲಿಜ ವೇದಿಕೆಯ ಅಧ್ಯಕ್ಷ ಎನ್.ಪಿ..ಮುನಿಕೃಷ್ಣಪ್ಪ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ರಾಜ್ಯ ಸರ್ಕಾರದ ನಿವೃತ್ತ ವಿಶೇಷ ಕಾರ್ಯದರ್ಶಿ ಡಾ.ಜಿ.ಕೆ.ವಸಂತ್ ಕುಮಾರ್,ಗೌಡ ಸಮಾಜ ಒಕ್ಕೂಟದ ನಿರ್ದೇಶಕ ಕೆ.ಜಿ.ಅಶ್ವಿನಿ ಕುಮಾರ್, ಹಾಕಿ ಕೂರ್ಗ್ ಉಪಾಧ್ಯಕ್ಷೆ ಯಮುನಾ ಚಂಗಪ್ಪ, ಚಿಕ್ಕಬಳ್ಳಾಪುರ ಕಸಾಪ ಮಾಜಿ ಅಧ್ಯಕ್ಷ ಕೈವಾರ ಶ್ರೀನಿವಾಸ್,ಮೈಸೂರು ಜಯನಗರ ಬಲಿಜ ಸಂಘಂ ನಿಕಟಪೂರ್ವ ಅಧ್ಯಕ್ಷ ಹೇಮಂತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.

ADVERTISEMENT

ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ 2023-24 ನೇ ಸಾಲಿನಲ್ಲಿ ಶೇ.70 ಕ್ಕೂ ಅಧಿಕ ಅಂಕ ಗಳಿಸಿರುವ ಬಲಿಜ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಹರಿರುತ್ತಾರೆ ಎಂದರು.

ಸಾಯಿ ಶಂಕರ ವಿದ್ಯಾಸಂಸ್ಥೆಯ ಸ್ಥಾಪಕರಾದ ಝರು ಗಣಪತಿ, ಕೊಡಗು ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಕೆ.ಬಿ.ಗಿರೀಶ್ ಗಣಪತಿ, ಮುಖಂಡರಾದ ವಿಜು ಸುಬ್ರಮಣಿ, ಸಮಾಜದ ಪ್ರಧಾನ ಕಾರ್ಯದರ್ಶಿ ಟಿ.ಸಿ.ಶ್ಯಾಮಲ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.