ADVERTISEMENT

ಮಡಿಕೇರಿ: ದೇವಟ್ ಪರಂಬುವಿನಲ್ಲಿ ಸಿಎನ್‍ಸಿಯಿಂದ ಪುಷ್ಪ ನಮನ

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 13:10 IST
Last Updated 12 ಜುಲೈ 2023, 13:10 IST
ದೇವಟ್ ಪರಂಬುವಿನ ಸ್ಮಾರಕದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಮುಖಂಡರು ಮಂಗಳವಾರ ಪುಷ್ಪ ನಮನ ಸಲ್ಲಿಸಿದರು.
ದೇವಟ್ ಪರಂಬುವಿನ ಸ್ಮಾರಕದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಮುಖಂಡರು ಮಂಗಳವಾರ ಪುಷ್ಪ ನಮನ ಸಲ್ಲಿಸಿದರು.   

ಮಡಿಕೇರಿ: ಇಲ್ಲಿನ ದೇವಟ್ ಪರಂಬುವಿನ ಸ್ಮಾರಕದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಮುಖಂಡರು ಮಂಗಳವಾರ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ, ‘ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್‍ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಭದ್ರತೆ ಒದಗಿಸಬೇಕು, ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವ ನರಮೇಧವನ್ನು ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಕಲಿಯಂಡ ಪ್ರಕಾಶ್, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್, ಕಾಟುಮಣಿಯಂಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT