ಮಡಿಕೇರಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ನಿರ್ಮಾಣದ ಯೋಜನೆ ಕುರಿತು ಮರು ಪರಿಶೀಲನೆ ಮಾಡಬೇಕು ಹಾಗೂ ಇನ್ನು15 ದಿನಗಳಲ್ಲಿ ಇದಕ್ಕೆ ಪರ್ಯಾಯ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಬೇಕು ಎಂದು ಇಲ್ಲಿ ಗುರುವಾರ ನಡೆದ ರಾಜ್ಯ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿತು.
ಸಮಿತಿ ಅಧ್ಯಕ್ಷ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಅವರ ಗೈರು ಹಾಜರಿಯಲ್ಲಿ ಸಮಿತಿ ಸದಸ್ಯ ಎಸ್.ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ 2015ರಲ್ಲಿ ನಿರ್ಮಾಣವಾಯಿತು. ಅಂದಿನಿಂದ ಇಂದಿನವರೆಗೂ ಅದಕ್ಕೆ ತಡೆಗೋಡೆ ನಿರ್ಮಿಸಲು ಸಾಧ್ಯವಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.