
ಪ್ರಜಾವಾಣಿ ವಾರ್ತೆಸಾಂದರ್ಭಿಕ ಚಿತ್ರ
ಎ.ಐ ಮೂಲಕ ರಚಿಸಿದ್ದು
ಮಡಿಕೇರಿ: ಇಲ್ಲಿನ ಕೊಡಗು ಜಿಲ್ಲಾ ನ್ಯಾಯಾಲಯದ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಇ- ಮೇಲ್ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳವು ಸೋಮವಾರ ತಪಾಸಣೆ ನಡೆಸುತ್ತಿದೆ.
ವಕೀಲರು ಹಾಗೂ ಸಾರ್ವಜನಿಕರನ್ನು ಕಟ್ಟಡದಿಂದ ಹೊರಕ್ಕೆ ಕಳುಹಿಸಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.