
ಪ್ರಜಾವಾಣಿ ವಾರ್ತೆ
ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಭಾರಿ ಮಳೆ ಸುರಿದಿದೆ.
ಸಂಜೆಯಿಂದ ಆರಂಭವಾದ ಮಳೆ ರಾತ್ರಿಯವರೆಗೂ ರಭಸದಲ್ಲಿ ಸುರಿಯಿತು. ಇದರಿಂದ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ಪುಟ್ಟಸ್ವಾಮಿ ಅವರ ಮನೆಗೆ ಮಳೆ ನೀರು ನುಗ್ಗಿದೆ. ಕುಶಾಲನಗರದ ಬಸ್ ನಿಲ್ದಾಣದ ಅಂಗಡಿಗಳಿಗೂ ನೀರು ನುಗ್ಗಿದೆ. ನಿರಂತರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.