ಮಡಿಕೇರಿ: ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಕೊಡಗಿನಲ್ಲಿ ನದಿಗಳೆಲ್ಲವೂ ತುಂಬಿ ಹರಿಯುತ್ತಿವೆ.
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆಗೆ ಕಾವೇರಿ ನದಿ ಪ್ರವಾಹದ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ಆದರೆ ಪರ್ಯಾಯ ರಸ್ತೆ ಇದೆ.
ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಜನರನ್ನು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.