ಮಡಿಕೇರಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಭಾನುವಾರ ಕೊಡಗು ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸುಮಾರು 77 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಲಾಗುತ್ತಿದೆ. ಇವರಲ್ಲಿ ಬಹುಪಾಲು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳೇ ಇದ್ದಾರೆ.
ತುಂತುರು ಮಳೆಯಲ್ಲಿ ಪರಸ್ಪರ ಕೈಹಿಡಿದು ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.