ADVERTISEMENT

ಕೊಡಗು: ಗಾಯಗೊಂಡಿದ್ದ ಹುಲಿ ಸೆರೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 7:50 IST
Last Updated 12 ಫೆಬ್ರುವರಿ 2026, 7:50 IST
<div class="paragraphs"><p>ಹುಲಿ ಸೆರೆ</p></div>

ಹುಲಿ ಸೆರೆ

   

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೆಸಗೂರು ಸಮೀಪ 6 ವರ್ಷದ ಗಂಡು ಹುಲಿಯನ್ನು ಅರಣ್ಯ ಇಲಾಖೆ ತಂಡ ಸೆರೆ ಹಿಡಿದಿದೆ.

‘ಒಂದು ವಾರದಿಂದ 7 ಜಾನುವಾರು ಹುಲಿಗೆ ಬಲಿಯಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಮೂಡಿತ್ತು. ಸಾಕಾನೆಗಳ ನೆರವಿನಲ್ಸಿ ಸತತ 4 ಗಂಟೆ ಕಾರ್ಯಾಚರಣೆ ನಡೆಯಿತು. ಹುಲಿ ಕಾಲಿಗೆ ಗಾಯವಾಗಿದ್ದು, ಅಸ್ವಸ್ಥವಾಗಿತ್ತು. ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನಕ್ಕೆ ರವಾನಿಸಲಾಗಿದೆ’ ಡಿಸಿಎಫ್ ಜಗನ್ನಾಥ್ ‘ಪ್ರಜಾವಾಣಿ’ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.