ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯಿತು
ನಾಪೋಕ್ಲು: ನಿರಂತರ ಮಳೆಯಿಂದಾಗಿ ನಾಲ್ಕುನಾಡು ವ್ಯಾಪ್ತಿಯ ಕೈಲ್ ಮುಹೂರ್ತ ಹಬ್ಬದ ಕ್ರೀಡಾಕೂಟಗಳನ್ನು ಮುಂದೂಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸಮೀಪದ ಬಲ್ಲಮಾವಟಿ ಗ್ರಾಮದ ಅಪೋಲೊ ಯುವಕ ಸಂಘ ಮತ್ತು ಕಾವೇರಿ ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಾಡಹಬ್ಬ ಕೈಲ್ ಮುಹೂರ್ತ ಪ್ರಯುಕ್ತ ಆಟೋಟ ಕೂಟವನ್ನು ಗುರುವಾರ ಆಯೋಜಿಸಲಾಗಿತ್ತು.
ಇಲ್ಲಿನ ಕೆಪಿಎಸ್ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಭಗವತಿ ಯುವಕ ಸಂಘದಿಂದ ಹಾಗೂ ಬೇತುಗ್ರಾಮದಲ್ಲಿ ಮಕ್ಕಿ ಶಾಸ್ತಾವು ಯುವಕ ಸಂಘದಿಂದ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಹಗ್ಗ ಜಗ್ಗಾಟ, ಓಟದ ಸ್ಪರ್ಧೆಗಳು, ವಿದ್ಯಾರ್ಥಿಗಳಿಗೆ ವಿವಿಧ ಆಟದ ಸ್ಪರ್ಧೆಗಳು, ಬೈಕ್ ಮತ್ತು ಸೈಕಲ್ ಮಂದಗತಿಯ ಚಾಲನೆ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.