ಮಡಿಕೇರಿ: ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ–275ರಲ್ಲಿ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಹಂತ ತಲುಪಿದೆ.
ಹೀಗಾಗಿ, ಇಲ್ಲಿ ಎಲ್ಲ ಬಗೆಯ ವಾಹನ ಸಂಚಾರವನ್ನು ಜುಲೈ 22ರವರೆಗೆ ನಿತ್ಯ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ. ಜಿಲ್ಲೆಯ ಮೂಲಕ ಮಂಗಳೂರಿನಿಂದ ಮೈಸೂರು, ಬೆಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್–ಕೊಟ್ಟಿಗೆಹಾರ ಮೂಲಕ ಪ್ರಯಾಣಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.