ADVERTISEMENT

ಕೊಡಗು | ಗುಂಡು ಹಾರಿಸಿಕೊಂಡು ವೃದ್ಧೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಮೇ 2020, 7:58 IST
Last Updated 2 ಮೇ 2020, 7:58 IST

ಪೊನ್ನಂಪೇಟೆ (ಕೊಡಗು): ವೃದ್ಧೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಕ್ಷಿಣ ಕೊಡಗಿನ ವಿರಾಜಪೇಟೆ ತಾಲ್ಲೂಕು ಹೈಸೊಡ್ಲೂರು ಗ್ರಾಮದ ದಿವಂಗತ ಪಿ. ಲಕ್ಷ್ಮಣ ಅವರ ಪತ್ನಿ ತಾರಾ (70) ಎಂಬುವವರು ಶನಿವಾರ ಬೆಳಿಗ್ಗೆ ಮನೆಯಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.