ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಗುರುವಾರ ರಾತ್ರಿ ಇಡೀ ಹಾಗೂ ಶುಕ್ರವಾರ ಬೆಳಿಗ್ಗೆ ಗಾಳಿ ತೀವ್ರ ವೇಗದಲ್ಲಿ ಬೀಸುತ್ತಿದ್ದು, ಮರಗಳು ಧರೆಗುರುಳುತ್ತಿವೆ. ಮಳೆಯೂ ಧಾರಾಕಾರವಾಗಿ ಸುರಿಯುತ್ತಿದೆ.
ಮಡಿಕೇರಿ-ಮೈಸೂರು ಸಂಪರ್ಕಿಸುವ ರಸ್ತೆಯಲ್ಲಿ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ಶುಕ್ರವಾರ ನಸುಕಿನಲ್ಲಿ ರಸ್ತೆಗೆ ಮರ ಉರುಳಿ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ರಸ್ತೆಯಲ್ಲಿ ವಾಹನಗಳು ಸಂಚರಿಸಲಾಗದೆ ಸಾಲುಗಟ್ಟಿ ನಿಂತಿದ್ದವು.
ಮಳೆ, ಗಾಳಿ ತೀವ್ರಗೊಂಡಿರುವುದರಿಂದ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ಶುಕ್ರವಾರ ರಜೆ ಘೋಷಿಸಿದೆ.
ಹಾರಂಗಿ ಜಲಾಶಯಕ್ಕೆ ಅತ್ಯಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿಗೆ 10,158 ಕ್ಯುಸೆಕ್ ನೀರನ್ನು ರಾತ್ರಿಯಿಂದ ಬಿಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.