ಶೆಟ್ಟಿಗೇರಿ ಮತ್ತು ಹೈಸೂಡ್ಲೂರು ಮಧ್ಯ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ.
ಪೊನ್ನಂಪೇಟೆ ಹೋಬಳಿ ವ್ಯಾಪ್ತಿಯಲ್ಲಿ 20 ಸೆಂ.ಮೀಗೂ ಅಧಿಕ ಮಳೆ ಸುರಿದಿರುವುದರಿಂದ ಕಾನೂರು ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದೆ. ಆದರೆ, ಈ ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.
ಶೆಟ್ಟಿಗೇರಿ ಮತ್ತು ಹೈಸೂಡ್ಲೂರು ಮಧ್ಯ ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.
ನಾಪೋಕ್ಲು ಹೋಬಳಿಯಲ್ಲಿ 15 ಸೆಂ.ಮೀ ಮಳೆ ಸುರಿದಿರುವುದರಿಂದ ಕಾವೇರಿ ನದಿ ನೀರು ರಸ್ತೆಗೆ ಬಂದು ಹಲವು ಗ್ರಾಮಗಳು ಸಂಪರ್ಕ ಕಡಿದುಕೊಂಡಿವೆ. ಮಳೆ ಮತ್ತು ಗಾಳಿ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.