ADVERTISEMENT

Kodagu Rains | ಕೊಡಗಿನಲ್ಲಿ ಮುಂದುವರಿದ ಮಳೆ: ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2023, 6:12 IST
Last Updated 5 ಜುಲೈ 2023, 6:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ನಗರ ಸೇರಿದಂತೆ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಬುಧವಾರ ಮಳೆ ಮುಂದುವರಿದಿದೆ. ಇದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲು ಏರಿಕೆಯಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಇದೇ ಮೊದಲ ಬಾರಿಗೆ ಒಳ ಹರಿವು ಒಂದೂವರೆ ಸಾವಿರ ಕ್ಯುಸೆಕ್ ದಾಟಿದೆ.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ಶ್ರೀಮಂಗಲದ ಸಮೀಪ ರಸ್ತೆಗೆ ಮರವೊಂದು ಉರುಳಿ ಬಿದ್ದಿದ್ದು, ಖಾಸಗಿ ಬಸ್ ಗೆ ಸಣ್ಣ ಪ್ರಮಾಣದ ಹಾನಿಯಾಗಿದೆ.

ADVERTISEMENT

ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 19 ಸೆಂ.ಮೀನಷ್ಟು ಮಳೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.