ADVERTISEMENT

ಸೋಮವಾರಪೇಟೆ | ಗೋಡೆ ಕುಸಿದು ಮಹಿಳೆ ಸಾವು; ಮೂವರು ಮಕ್ಕಳು, ಸೋದರನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 4:27 IST
Last Updated 26 ಜುಲೈ 2025, 4:27 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ, ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ಸುಷ್ಮಾ (26) ಎಂಬುವವರು ಮನೆಯ ಗೋಡೆ ಕುಸಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇವರ ಸೋದರ ಅಕ್ಷಯ್ ಹಾಗೂ ಮೂವರು ಮಕ್ಕಳಿಗೆ ಗಾಯಗಳಾಗಿದ್ದು ಚಿಕಿತ್ಸೆಗೆ ದಾಖಲಿಸಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರದ ಸುಷ್ಮಾ ಅವರು ಪತಿ, ತಮ್ಮ ಹಾಗೂ ಮೂವರು ಮಕ್ಕಳೊಂದಿಗೆ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಪತಿ ಕಲಬುರಗಿಗೆ ತೆರಳಿದ್ದರು. ರಾತ್ರಿ ಸುರಿದ ಭಾರಿ ಮಳೆಗೆ ಶನಿವಾರ ಬೆಳಿಗ್ಗೆ 5.30 ರ ಸಮಯದಲ್ಲಿ ಎಲ್ಲರೂ ಮಲಗಿರುವ ವೇಳೆ ಗೋಡೆ ಕುಸಿದಿದೆ. ಸುಷ್ಮಾ ಅವರ ತಲೆಯ ಮೇಲೆಯೇ ಗೋಡೆ ಕುಸಿದು ಸ್ಥಳದಲ್ಲೇ ಮೃತಪಟ್ಟರು.

ತಹಶೀಲ್ದಾರರ್ ಕೃಷ್ಣಮೂರ್ತಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.