ADVERTISEMENT

ಕೊಡಗು: ವಾರಕ್ಕೆ ಐದು ದಿನ ಅಂಗಡಿಗಳು ಬಂದ್‌, ದಿನಸಿ ಖರೀದಿಗೆ 2 ದಿನ ಅವಕಾಶ

​ಪ್ರಜಾವಾಣಿ ವಾರ್ತೆ
Published 3 ಮೇ 2021, 16:44 IST
Last Updated 3 ಮೇ 2021, 16:44 IST
ವಿರಾಜಪೇಟೆಯಲ್ಲಿ ಅಂಗಡಿಗಳು ಮುಚ್ಚಿರುವುದು–ಸಾಂದರ್ಭಿಕ ಚಿತ್ರ
ವಿರಾಜಪೇಟೆಯಲ್ಲಿ ಅಂಗಡಿಗಳು ಮುಚ್ಚಿರುವುದು–ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಡಳಿತವು ಬಿಗಿ ಕ್ರಮಕ್ಕೆ ಮುಂದಾಗಿದ್ದು, ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಈ ವೇಳೆ, ಜಿಲ್ಲೆಯಾದ್ಯಂತ ದಿನಸಿ, ಹಣ್ಣು-ತರಕಾರಿ, ಮಾಂಸದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದರು. ಮಂಗಳವಾರದಿಂದಲೇ ಈ ಕ್ರಮ ಜಾರಿಯಾಗಲಿದೆ.

ಔಷಧ ಅಂಗಡಿಗಳು ಹಾಗೂ ಪೆಟ್ರೋಲ್ ಬಂಕ್‍ಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಪತ್ರಿಕೆ ವಿತರಣೆಗೆ, ಪ್ರತಿನಿತ್ಯ ಬೆಳಿಗ್ಗೆ 6ರಿಂದ 10 ಗಂಟೆ ತನಕ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಮೈಸೂರು, ಬೆಂಗಳೂರು ಹಾಗೂ ಕೇರಳದಿಂದಲೂ ಜನರು ಜಿಲ್ಲೆಗೆ ಸಂಚರಿಸುತ್ತಿರುವುದೂ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಳ ಕಾರಣ ಎಂದಿದ್ದಾರೆ. ಸೋಮವಾರ 24 ಗಂಟೆಗಳ ಅಂತರದಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ದೃಢಪಟ್ಟ 628 ಪ್ರಕರಣಗಳು ದಾಖಲಾಗಿವೆ. ಒಟ್ಟು 12,523 ಪ್ರಕರಣಗಳು ದಾಖಲಾಗಿದ್ದು, 8,235 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.