ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಒಂದು ವಾರದಲ್ಲಿ ಫಲಿತಾಂಶ ಪ್ರಕಟವಾಗಿದೆ.
ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಈ ಹಿಂದೆಯೂ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 22 ಕಾಲೇಜುಗಳ ಸುಮಾರು 4000 ವಿದ್ಯಾರ್ಥಿಗಳು ಹಾಜರಾಗಿದ್ದರು.
ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ಪ್ರಕಟಿಸಿದರು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು(ಮೌಲ್ಯಮಾಪನ) ಡಾ.ಎಂ
ಸುರೇಶ್,ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ಪ್ರೊ.ಎಂ.ಎನ್.ರವಿಶಂಕರ್,ಯುಯುಸಿಎಂಎಸ್ ನೋಡಲ್ ಅಧಿಕಾರಿ ಗಗನ್ ಇದ್ದರು.
ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಯುಯುಸಿಎಂಎಸ್ ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.