ADVERTISEMENT

ಕೊಡಗು ವಿ.ವಿ ಸ್ನಾತಕೋತ್ತರ ಪದವಿ: ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 13:37 IST
Last Updated 11 ಜೂನ್ 2025, 13:37 IST
ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರರವರು ಆನ್ಸೆನ್ ತಂತ್ರಾಂಶದಲ್ಲಿ ಪ್ರಕಟಿಸಿದರು.
ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರರವರು ಆನ್ಸೆನ್ ತಂತ್ರಾಂಶದಲ್ಲಿ ಪ್ರಕಟಿಸಿದರು.   

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರರವರು ಆನ್ಸೆನ್ ತಂತ್ರಾಂಶದಲ್ಲಿ ಪ್ರಕಟಿಸಿದರು.

ವಿಶ್ವವಿದ್ಯಾಲಯಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ನಡೆಸಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ 2024-25 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿಯ ಫಲಿತಾಂಶವನ್ನು ಕೇವಲ ಎರಡು ವಾರಗಳಲ್ಲಿ ಪ್ರಕಟಿಸುವ ಮೂಲಕ ಈ ಹಿಂದೆ ಕೂಡ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಹಿರಿಮೆಯನ್ನು ಕೊಡಗು ವಿಶ್ವವಿದ್ಯಾಲಯವು ಮುಂದುವರಿಸಿಕೊಂಡು ಬಂದಿದೆ ಎಂದು ತಿಳಿಸಿದರು.

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ವಿಶ್ವವಿದ್ಯಾಲಯದ ವೆಬ್ ಸೈಟ್ kuk.karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ ಎಂದರು.

ADVERTISEMENT

ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಸುರೇಶ್ ಎಂ, ಮೌಲ್ಯಮಾಪನ ವಿಭಾಗದ ವಿಶೇಷ ಅಧಿಕಾರಿ ಪ್ರೊ. ರವಿಶಂಕರ್ ಎಂ.ಎನ್, ಯುಯುಸಿಎಂಎಸ್‌‌‌ನ ನೋಡಲ್ ಅಧಿಕಾರಿ ಗಗನ್ ಎಚ್.ಎಸ್, ಉಪನ್ಯಾಸಕ ಜ಼ಮೀರ್ ಅಹಮದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.