ADVERTISEMENT

ಕೊಡವ ಟ್ರೈಬ್, ಟೀಮ್ ಲಿವರೇಜ್ ತಂಡಗಳಿಗೆ ಗೆಲವು

ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್‌ನಲ್ಲಿ ಭಾರಿ ಅಂತರದ ಜಯ

​ಪ್ರಜಾವಾಣಿ ವಾರ್ತೆ
Published 7 ಮೇ 2024, 6:24 IST
Last Updated 7 ಮೇ 2024, 6:24 IST

ಮಡಿಕೇರಿ: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ನಲ್ಲಿ ಸೋಮವಾರ ಕೊಡವ ಟ್ರೈಬ್ ತಂಡ ಮತ್ತು ಟೀಮ್ ಲಿವರೇಜ್ ತಂಡಗಳು ಗೆಲುವು ಸಾಧಿಸಿದವು.

ಕೊಡವ ಟ್ರೈಬ್ ತಂಡವು ಅಂಜಿಗೇರಿ ನಾಡ್ ತಂಡದ ವಿರುದ್ಧ 81 ರನ್‌ಗಳ ಭಾರಿ ಅಂತರದ ಗೆಲುವು ಪಡೆಯಿತು. ಟಾಸ್ ಗೆದ್ದ ಅಂಜಿಗೇರಿ ನಾಡ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕೊಡವ ಟ್ರೈಬ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 196 ರನ್‌ಗಳನ್ನು ಗಳಿಸಿತು. ಅಂಜಿಗೇರಿ ನಾಡ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಕೇವಲ 115 ರನ್‌ಗಳನ್ನು ಮಾತ್ರವೇ ಗಳಿಸಿತು.

ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್ ತಂಡದ ವಿರುದ್ಧ ಟೀಮ್ ಲಿವರೇಜ್ 2 ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಗೆದ್ದ ಟೀಮ್ ಲಿವರೇಜ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಎಂಟಿಬಿ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್‌ಗಳನ್ನು ಗಳಿಸಿತು. ಗುರಿ ಬೆನ್ನತ್ತಿದ ಟೀಮ್ ಲಿವರೇಜ್ ತಂಡ 19.2 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗೆಲುವು ಸಾಧಿಸಿತು.

ADVERTISEMENT

14 ರನ್‌ಗಳನ್ನು ಗಳಿಸಿ, 3 ವಿಕೆಟ್ ಗಳಿಸಿದ ಟೀಮ್ ಲಿವರೇಜ್ ತಂಡದ ಸಂಜು ಬೋಪಯ್ಯ ಅವರು ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.