
ನಾಪೋಕ್ಲು: ಯವಕಪಾಡಿ ನಿವಾಸಿ ಆದಿವಾಸಿ ಹೋರಾಟಗಾರ ಕುಡಿಯರ ಮುತ್ತಪ್ಪ ಅವರು ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಮಂಡ್ಯ ಕುಳುವ ಸಮಾಜ ಹಾಗೂ ಡ್ರೀಮ್ ಫೌಂಡೇಶನ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಡಿಯರ ಮುತ್ತಪ್ಪ ಕುಡಿಯ ಜನಾಂಗಕ್ಕೆ ಸರ್ಕಾರದಿಂದ ಇರುವ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆ ಕೈಗೊಂಡಿದ್ದರು. ಕೊಡಗು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕ್ರೀಡೆ0 ,ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದುಡಿದ ಇವರ ಸೇವೆಯನ್ನು ಪರಿಗಣಿಸಿ ವಿವೇಕಾನಂದ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಉತ್ತಮ ಸಮಾಜ ಸೇವಕ ಪ್ರಶಸ್ತಿ ಮೂರು ಬಾರಿ ಲಭಿಸಿದೆ. 2020- 21ರ ಸಾಲಿನಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಜಾನಪದ ಕಲಾವಿದ ಪ್ರಶಸ್ತಿ ಲಭಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.