ADVERTISEMENT

ಕಂಬಿಬಾಣೆ: ಜನಸೂರೆಗೊಂಡ ಕೃಷ್ಣ-ರಾಧೆ-ಯಶೋಧೆ‌ ಛದ್ಮವೇಷ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 5:14 IST
Last Updated 21 ಆಗಸ್ಟ್ 2025, 5:14 IST
ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ಕೃಷ್ಣಜನ್ಮಾಷ್ಟಮಿ ಏರ್ಪಡಿಸಿದ್ದ ಛದ್ಮವೇಷ ಸ್ಪರ್ಧೆ
ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ಕೃಷ್ಣಜನ್ಮಾಷ್ಟಮಿ ಏರ್ಪಡಿಸಿದ್ದ ಛದ್ಮವೇಷ ಸ್ಪರ್ಧೆ   

ಸುಂಟಿಕೊಪ್ಪ: ಸಮೀಪದ ಕಂಬಿಬಾಣೆ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ಮೂರನೇ ವರ್ಷದ ಕೃಷ್ಣಜನ್ಮಾಷ್ಟಮಿಯನ್ನು ಮಂಗಳವಾರ ಅನ್ನಪೂರ್ಣೇಶ್ವರಿ ಫಂಕ್ಷನ್ ಹಾಲ್‌ನಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಜಾತಿ–ಭೇದ ಮೀರಿ ಸುಮಾರು 90 ಮಕ್ಕಳು ಕೃಷ್ಣ ರಾಧೆ ಮತ್ತು ಯಶೋದೆಯ ವೇಷಭೂಷಣ ಧರಿಸಿ ಜನರ ಚಪ್ಪಾಳೆ ಗಿಟ್ಟಿಸಿಕೊಂಡರು.

ಕಮಲ ಯುವತಿ ಮಂಡಳಿಯ ಅಧ್ಯಕ್ಷೆ ವೀಣಾ ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  
ಕಮಲ ನೆಹರು ಮಹಿಳಾ ಮಂಡಳಿಯ ಅಧ್ಯಕ್ಷೆ ಶೋಭಾ ಸೋಮಯ್ಯ ಮಾತನಾಡಿದರು.  

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ಕೃಷ್ಣಜನ್ಮಾಷ್ಟಮಿ ಏರ್ಪಡಿಸಿದ್ದ ಛದ್ಮವೇಷ ಸ್ಪರ್ಧೆ

ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ ಬಹುಮಾನದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಆಕರ್ಷಕ ಬಹುಮಾನವನ್ನು ನೀಡಲಾಯಿತು. ಕೊನೆಗೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಮಹಿಳೆಯರಿಗೆ ಮತ್ತು ಪುರುಷರಿಗೆ ಏರ್ಪಡಿಸಲಾಗಿತ್ತು.

ADVERTISEMENT

ಕಾರ್ಯಕ್ರಮಕ್ಕೆ ಕಂಬಿಬಾಣೆ, ಅತ್ತೂರು ನಲ್ಲೂರು, ಚಿಕ್ಲಿಹೊಳೆ, ಕೊಡಗರಹಳ್ಳಿ, ಉಪ್ಪುತೋಡು ಗ್ರಾಮದ ಸಾರ್ವಜನಿಕರು ಭಾಗವಹಿಸಿದ್ದರು‌‌. ಯುವತಿ ಮತ್ತು ಮಹಿಳಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು‌.

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ಕೃಷ್ಣಜನ್ಮಾಷ್ಟಮಿ ಏರ್ಪಡಿಸಿದ್ದ ಛದ್ಮವೇಷ ಸ್ಪರ್ಧೆ
ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ಕೃಷ್ಣಜನ್ಮಾಷ್ಟಮಿ ಏರ್ಪಡಿಸಿದ್ದ ಛದ್ಮವೇಷ ಸ್ಪರ್ಧೆ
ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಮಲ ನೆಹರು ಯುವತಿ ಮಂಡಳಿ ವತಿಯಿಂದ ಕೃಷ್ಣಜನ್ಮಾಷ್ಟಮಿ ಏರ್ಪಡಿಸಿದ್ದ ಛದ್ಮವೇಷ ಸ್ಪರ್ಧೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.