ADVERTISEMENT

ಮಡಿಕೇರಿ | ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2023, 2:52 IST
Last Updated 21 ಆಗಸ್ಟ್ 2023, 2:52 IST
   

ಮಡಿಕೇರಿ: ಕೆಎಸ್ ಆರ್ ಟಿ ಸಿ ಬಸ್ ವೊಂದು ಸೋಮವಾರ ಬೆಳಿಗ್ಗೆ ಡಿಕ್ಕಿ ಹೊಡೆದು ನಗರದ ಟೋಲ್ ಗೇಟ್ ನಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿದೆ.

ಬಸ್ ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಈ ಬಸ್ ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ವಾಹನವೊಂದು ಅಡ್ಡಲಾಗಿ ಬಂದಿದ್ದರಿಂದ ಬಸ್ ಅನ್ನು ಪಕ್ಕಕ್ಕೆ ತಿರುಗಿಸಿದಾಗ ಅಪಘಾತ ಸಂಭವಿಸಿದೆ. ನಿರ್ವಾಹಕರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT